Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪವಿತ್ರ್ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್, ಸಗ್ಳೆ" ಗೊತ್ತ್ ಅಸಲ್ಲ್ಯಾಚೆ ಶಾನ್‍ಪಾನ್ ಮಿಯಾ ನಾಸ್ ಕರ್‍ತಾ ಅನಿ ಶಾನ್ಯಾಂಚೆ ಶಾನ್‍ಪಾನ್ ಮಿಯಾ ಕಾಯ್ಬಿ ನ್ಹಯ್ ಸರ್ಕೆ ಕರುನ್ ಟಾಕ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:19
9 ತಿಳಿವುಗಳ ಹೋಲಿಕೆ  

ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು