Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:21 - ಕನ್ನಡ ಸತ್ಯವೇದವು C.L. Bible (BSI)

21 ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾನ್ ಅಪ್ನಾಚ್ಯಾ ಶಾನ್‍ಪಾನಾನ್ ನಿರ್ದಾರ್ ಕರಲ್ಲ್ಯಾ ಸರ್ಕೆ ಜಗಾನ್ ಅಪ್ನಾಚ್ಯಾ ಶಾನ್‍ಪಾನಾನ್‍ ದೆವಾಚಿ ವಳಕ್ ಧರುಕ್ ಹೊವ್ಕ್ ನಾ, ತಸೆ ಮನುನ್ ಅಮ್ಚ್ಯಾ ಬರ್‍ಯಾ ಖಬ್ರೆಚ್ಯಾ ಪಿಶೆಪಾನಾಚ್ಯಾ ವೈನಾ ವಿಶ್ವಾಸ್ ಕರ್ತಲ್ಯಾಕ್ನಿ ಸುಟ್ಕಾ ಕಮ್ವುನ್ ಘೆವ್ಚೆ ಮನ್ತಲಿ ದೆವಾಚಿ ಮರ್ಜಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:21
28 ತಿಳಿವುಗಳ ಹೋಲಿಕೆ  

ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು