Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:26 - ಕನ್ನಡ ಸತ್ಯವೇದವು C.L. Bible (BSI)

26 ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅತ್ತಾ ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್‍ ತುಮ್ಕಾ ಬಲ್ವುತಾನಾ ತುಮಿ ಖೈ ಹೊತ್ತ್ಯಾಶಿ ಮನ್ತಲೆ ಯಾದ್ ಕರಾ, ಮಾನ್ಸಾಚ್ಯಾ ನದ್ರೆ ಪರ್‍ಕಾರ್ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಲೈ ಶಾನೆ, ನಾಹೊಲ್ಯಾರ್ ಘಟ್ಮುಟ್, ನಾಹೊಲ್ಯಾರ್, ಸಮಾಜಾತ್ ಮೊಟ್ಯಾ ಮೊಟ್ಯಾ ಜಾಗ್ಯಾ ವೈನಿ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:26
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.


ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ಎಂತಲೇ ಜನರಿಗೆ ಆತನಲ್ಲಿದೆ ಭಯಭಕ್ತಿ ತಾವೇ ಜ್ಞಾನಿಗಳೆಂದುಕೊಳ್ಳುವವರಲಿ ದೇವರಿಗಿಲ್ಲ ಲಕ್ಷ್ಯ.”


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು