Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5-6 ಯಾಕಂದರೆ ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡ ಕಾರಣ ನೀವು ಎಲ್ಲಾ ನುಡಿಯಲ್ಲಿಯೂ ಎಲ್ಲಾ ತಿಳುವಳಿಕೆಯಲ್ಲಿಯೂ ಆತನಲ್ಲಿ ಸಮೃದ್ಧಿ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚ್ಯಾ ವೈನಾ ತುಮಿ ಸಗ್ಳ್ಯಾ ರಿತಿಚ್ಯಾ ಬೊಲ್ನ್ಯಾತ್ಲಿ ಅನಿ ಸಗ್ಳ್ಯಾ ಶಾನ್‍ಪಾನಾತ್ ಸಗ್ಳ್ಯಾ ವಾಟೆನ್ ಭರ್‍ಪುರ್ ವಾಡ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:5
27 ತಿಳಿವುಗಳ ಹೋಲಿಕೆ  

ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.


ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು