Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:10 - ಕನ್ನಡ ಸತ್ಯವೇದವು C.L. Bible (BSI)

10 ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಪುರ್ಪುರುಚೆ ನ್ಹಯ್; ತೆಂಚ್ಯಾತ್ಲ್ಯಾ ಉಲ್ಲ್ಯಾಸ್ಯಾನಿ ಪುರ್ ಪುರ್‌ಲ್ಯಾನಿ ಅನಿ ನಾಸ್ ಕರ್‍ತಲ್ಯಾ ದೆವಾಚ್ಯಾ ದುತಾನ್ ತೆಂಕಾ ಜಿವಾನಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:10
23 ತಿಳಿವುಗಳ ಹೋಲಿಕೆ  

ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


“ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು