Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:17 - ಕನ್ನಡ ಸತ್ಯವೇದವು C.L. Bible (BSI)

17 ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ಲೈ ಲೊಕಾ ಜಾಲ್ಯಾರ್ಬಿ ಭಾಕ್ರಿ ಎಕುಚ್, ತಸೆ ಮನುನ್ ಅಮಿ ಎಕ್ ಆಂಗ್ ಹೊತಾಂವ್; ಕಶ್ಯಾಕ್ ಮಟ್ಲ್ಯಾರ್, ಅಮಿ ಸಗ್ಳೆ ಜಾನಾ ತ್ಯಾ ಎಕುಚ್ ಭಾಕ್ರಿತ್ ವಾಟೊ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:17
17 ತಿಳಿವುಗಳ ಹೋಲಿಕೆ  

ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು