Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ಮನ್ತಾನಾ ಮಿಯಾ ಕಾಯ್ ಸಾಂಗುಕ್ ಬಗುಕ್ ಲಾಗ್ಲಾ? ಮುರ್ತಿಯಾಕ್ನಿ ಭೆಟ್ವಲ್ಲೆ ಖಾನ್ ಎಕ್ ಖರಿ ಬಲಿ ಮನುನ್ ಮನ್ತಾ ಕಾಯ್? ನಾ ಹೊಲ್ಯಾರ್ ಎಕ್ ಮುರ್ತಿ ಖರೊ ದೆವ್ ಮನುನ್ ಮನ್ತಾ? ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:19
10 ತಿಳಿವುಗಳ ಹೋಲಿಕೆ  

ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು