Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:32 - ಕನ್ನಡ ಸತ್ಯವೇದವು C.L. Bible (BSI)

32 ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜುದೆವಾಕ್ನಿ ಹೊಂವ್ದಿತ್, ಜುದೆವ್‍ ನ್ಹಯ್ ಅಸಲ್ಲ್ಯಾಕ್ನಿ ಹೊಂವ್ದಿತ್, ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊಂವ್ದಿತ್, ಬುರ್ಶೆ ಕರ್ತಲೆ ಶಿಕ್ವುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:32
19 ತಿಳಿವುಗಳ ಹೋಲಿಕೆ  

ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು