Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:9 - ಕನ್ನಡ ಸತ್ಯವೇದವು C.L. Bible (BSI)

9 ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಧನಿಯಾಚಿ ಪರಿಕ್ಷಾ ಕರುಚೆ ನ್ಹಯ್, ತೆನಿ ಉಲ್ಲ್ಯಾಸ್ಯಾಚಿ ಪರಿಕ್ಷಾ ಕರ್‍ಲ್ಯಾನಿ ಅನಿ ಸಾಪಾನಿ ತೆಂಕಾ ನಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:9
11 ತಿಳಿವುಗಳ ಹೋಲಿಕೆ  

ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II


ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.


ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II


“ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.


ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II


ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು