Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:18 - ಕನ್ನಡ ಸತ್ಯವೇದವು C.L. Bible (BSI)

18 ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಚ್ಯಾ ಮದ್ದಿ ಭೆದ್‍ಭಾವ್ ಹಾತ್, ಹೆ ಖರೆ ಹಾಯ್. ಹೆಚ್ಯಾ ವೈನಾ ತುಮ್ಚ್ಯಾತ್ಲೊ ಬರೊ ಕೊನ್ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:18
4 ತಿಳಿವುಗಳ ಹೋಲಿಕೆ  

ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು