Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:20 - ಕನ್ನಡ ಸತ್ಯವೇದವು C.L. Bible (BSI)

20 ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಂತು ನೀವೆಲ್ಲರು ಕೂಡಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವೆಲ್ಲರೂ ಒಟ್ಟಾಗಿ ಸೇರಿದಾಗ ನೀವು ಮಾಡುವಂಥದ್ದು ನಿಜವಾಗಿಯೂ ಪ್ರಭುವಿನ ರಾತ್ರಿಭೋಜನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಒಟ್ಟಾಗಿ ಕೂಡಿಬರುವಾಗ, ನೀವು ಮಾಡುವ ಭೋಜನವು ಕರ್ತದೇವರ ಭೋಜನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಶೆ ರ್‍ಹಾತಾನಾ ತುಮಿ ಸಗ್ಳೆ ವಾಂಗ್ಡಾ ಮಿಳುನ್ ಕರ್ತ್ಯಾಶಿ ತೆ ಜೆವಾನ್ ಧನಿಯಾಚೆ ಜೆವಾನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:20
10 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?”


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಈಗ ನಾನು ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಮೆಚ್ಚಲಾರೆ. ನೀವು ಸಭೆ ಸೇರುವುದು ಒಳಿತಿಗಿಂತಲೂ ಹೆಚ್ಚಾಗಿ ಕೇಡನ್ನೆ ಉಂಟುಮಾಡುತ್ತಿದೆ.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು