1 ಕೊರಿಂಥದವರಿಗೆ 11:22 - ಕನ್ನಡ ಸತ್ಯವೇದವು C.L. Bible (BSI)22 ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆವ್ಕ್ ಅನಿ ಪಿವ್ಕ್ ತುಮ್ಚ್ಯಾ, ತುಮ್ಚ್ಯಾ ಘರಾತ್ ನಾ ಕಾಯ್? ದೆವಾಚೆ ಆರಾದನ್ ಕರ್‍ತಲ್ಯಾ ಜಾಗ್ಯಾಚಿ ತುಮಿ ಪರ್ವಾ ಕರಿನಸ್ತಾನಾ ರ್‍ಹಾವ್ಚೆ ಅನಿ ಗರಿಬಾಕ್ನಿ ತುಮಿ ಅಶೆ ಲಜ್ಜೆಕ್ ಘಾಲುಚೆ ಕಾಯ್? ಹ್ಯಾ ವಿಶಯಾತ್ ಮಿಯಾ ತುಮ್ಕಾ ಕಾಯ್ ಮನು? ತುಮ್ಕಾ ಹೊಗ್ಳು ಕಿ? ನಾ ತುಮ್ಕಾ ಹೊಗ್ಳುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |