Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:23 - ಕನ್ನಡ ಸತ್ಯವೇದವು C.L. Bible (BSI)

23 ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆ ಕಾಯ್ ಧನಿಯಾಕ್ನಾ ಮಿಯಾ ಘೆಟ್ಲಾ ತೆ ಮಿಯಾ ತುಮ್ಕಾ ಸಾಂಗುನ್ ದಿಲಾ. ತೆ ಕಾಯ್ ಮಟ್ಲ್ಯಾರ್, ಧನಿಯಾ ಜೆಜುಕ್ ದುಸ್ರ್ಯಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊಲೆ, ತ್ಯಾ ದಿಸ್ ರಾಚ್ಚೆ ಭಾಕ್ರಿ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:23
17 ತಿಳಿವುಗಳ ಹೋಲಿಕೆ  

ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.


ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು