Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:24 - ಕನ್ನಡ ಸತ್ಯವೇದವು C.L. Bible (BSI)

24 ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಕ್ ಧನ್ಯವಾದ್ ದಿವ್ನ್ ತಿ ಮೊಡ್ಲ್ಯಾನ್ ಅನಿ ಮಟ್ಲ್ಯಾನ್, “ಹೆ ಮಾಜೆ ಆಂಗ್ ತುಮ್ಚ್ಯಾ ಸಾಟ್ನಿ ದಿತಲೆ ಹೆ ಮಾಜ್ಯಾ ಯಾದಿಸಾಟ್ನಿ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:24
20 ತಿಳಿವುಗಳ ಹೋಲಿಕೆ  

ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


“ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.


ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು