Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:28 - ಕನ್ನಡ ಸತ್ಯವೇದವು C.L. Bible (BSI)

28 ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆಚ್ಯಾಸಾಟ್ನಿ ಹರ್ ಎಕ್ಲೊ ಅದ್ದಿ ಅಪ್ನಾಚಿ ಝಡ್ತಿ ಕರುಂದಿತ್ ಅನಿ ಮಾನಾ ಹಿ ಭಾಕ್ರಿ ಖಾಂವ್ದಿತ್ ಅನಿ ಹ್ಯಾ ಆಯ್ದಾನಾತ್ಲೆ ಫಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:28
13 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾಮೀ, ನಾನೋ? ನಾನೋ?” ಎಂದು ಕೇಳತೊಡಗಿದರು.


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು