Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:29 - ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಆಂಗ್ ಕಾಯ್ ಮನುನ್ ಕಳ್ವುನ್ ಘೆಯ್ ನಸ್ತಾನಾ ಖಾತಾ ಅನಿ ಫಿತಾ, ತೊ ಅಪ್ನಾಚ್ಯಾ ವರ್ತಿಚ್ ಝಡ್ತಿ ಹಾನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:29
11 ತಿಳಿವುಗಳ ಹೋಲಿಕೆ  

ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.


ನಿಮ್ಮಲ್ಲಿ ಅನೇಕರು ಈ ಕಾರಣದಿಂದಲೇ ದುರ್ಬಲರು, ಅಸ್ವಸ್ಥರು ಆಗಿದ್ದೀರಿ; ಮತ್ತು ಎಷ್ಟೋಮಂದಿ ಸತ್ತಿದ್ದಾರೆ.


ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.


ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು