Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:32 - ಕನ್ನಡ ಸತ್ಯವೇದವು C.L. Bible (BSI)

32 ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಜಾಗಾಚ್ಯಾ ವಾಂಗ್ಡಾ ಅಮ್ಕಾ ಝಡ್ತಿ ಹೊತಲೆ ನಕ್ಕೊ ಮನುನ್ ಧನಿಯಾನುಚ್ ಅಮ್ಕಾ ಝಡ್ತಿ ಕರುನ್ ಶಿಕ್ಷಾ ಲಾವುನ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:32
22 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ನಿಮ್ಮಲ್ಲಿ ಅನೇಕರು ಈ ಕಾರಣದಿಂದಲೇ ದುರ್ಬಲರು, ಅಸ್ವಸ್ಥರು ಆಗಿದ್ದೀರಿ; ಮತ್ತು ಎಷ್ಟೋಮಂದಿ ಸತ್ತಿದ್ದಾರೆ.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು