1 ಕೊರಿಂಥದವರಿಗೆ 11:34 - ಕನ್ನಡ ಸತ್ಯವೇದವು C.L. Bible (BSI)34 ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಭುಕ್ ಲಾಗಲ್ಲೊ ಅಪ್ನಾಚ್ಯಾ ಘರಾತುಚ್ ಜೆವ್ನ್ ಯೆಂವ್ದಿತ್, ನಾ ಹೊಲ್ಯಾರ್ ತುಮಿ ಜಲಮಲ್ಲೆಚ್ ತುಮ್ಚ್ಯಾ ಝಡ್ತಿಕ್ ಕಾರನ್ ಹೊತಾ.ಅನಿ ಹುರಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗ್ತಲೆ ಹಾಯ್ ತೆ ಮಿಯಾ ಥೈ ಯೆಲ್ಲೆ ತನ್ನಾ ಸಮಾ ಕರ್ತಾ. ಅಧ್ಯಾಯವನ್ನು ನೋಡಿ |