Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:4 - ಕನ್ನಡ ಸತ್ಯವೇದವು C.L. Bible (BSI)

4 ಪುರುಷನು ತಲೆಯ ಮೇಲೆ ಮುಸುಕು ಹಾಕಿಕೊಂಡು ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಕ್ರಿಸ್ತಯೇಸುವಿಗೆ ಅವಮಾನ ತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತನ್ನ ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆ ಮಾಡುವ ಇಲ್ಲವೆ, ಪ್ರವಾದನೆ ಹೇಳುವ ಪ್ರತಿ ಪುರುಷನೂ ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಗ್ನಿಕ್ ಗೊಳಾ ಹೊಲ್ಲ್ಯಾ ತನ್ನಾ ಟಕ್ಲೆ ಧಾಪುನ್ ಮಾಗ್ತಾ, ನಾಹೊಲ್ಯಾರ್ ಪ್ರವಾದ್ ಕರ್‍ತಾ ತೊ ಘೊಮಾನುಸ್ ಕ್ರಿಸ್ತಾಕ್ ಅವಮಾನ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:4
11 ತಿಳಿವುಗಳ ಹೋಲಿಕೆ  

ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಉದ್ದ ಕೂದಲು ಪುರುಷನಿಗೆ ಲಜ್ಜಾಸ್ಪದವೆಂಬುದೂ ನೀಳಕೂದಲು ಸ್ತ್ರೀಗೆ ಭೂಷಣವೆಂಬುದೂ ಸ್ವಭಾವಸಿದ್ಧವಲ್ಲವೇ? ಕೇಶರಾಶಿ ಸ್ತ್ರೀಗೆ ರಕ್ಷಾವರಣವಲ್ಲವೇ?


ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು.‍


ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು