1 ಕೊರಿಂಥದವರಿಗೆ 11:5 - ಕನ್ನಡ ಸತ್ಯವೇದವು C.L. Bible (BSI)5 ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತಲೆಯ ಮೇಲೆ ಮುಸುಕುಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿಕೊಂಡಿರುವದೂ ಒಂದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಟಕ್ಲೆ ಧಾಪಿ ನಸ್ತಾನಾ ಮಾಗ್ನಿ ಕರ್‍ತಾ ನಾಹೊಲ್ಯಾರ್ ಪ್ರವಾದ್ ಕರ್ತಾ, ತಿ ಬಾಯ್ಕೊಮನುಸ್ ಅಪ್ನಾಚ್ಯಾ ಘೊವಾಕ್ ಅವ್ಮಾನ್ ಕರ್‍ತಾ. ತೆನಿ ಟಕ್ಲೆ ಉಗ್ಡೆ ಸೊಡ್ತಲೆಬಿ ಅನಿ ತೆ ತಾಸುನ್ ಘೆಟಲ್ಲೆ ಬಿ ಸಮಾ. ಅಧ್ಯಾಯವನ್ನು ನೋಡಿ |