Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:7 - ಕನ್ನಡ ಸತ್ಯವೇದವು C.L. Bible (BSI)

7 ಪುರುಷನು ತಲೆಯ ಮೇಲೆ ಮುಸುಕುಹಾಕಬೇಕಾಗಿಲ್ಲ. ಏಕೆಂದರೆ, ಅವನು ದೇವರ ರೂಪ ಹಾಗೂ ಅವರ ಮಹಿಮೆಯ ಪ್ರತಿಬಿಂಬ. ಸ್ತ್ರೀಯಾದರೋ, ಪುರುಷನ ಮಹಿಮೆಯ ಪ್ರತಿಬಿಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಪುರುಷನು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬಾರದು. ಏಕೆಂದರೆ, ಪುರುಷನು ದೇವರ ಸ್ವರೂಪವಾಗಿದ್ದಾನೆ ಮತ್ತು ದೇವರ ಪ್ರಭಾವವಾಗಿದ್ದಾನೆ. ಆದರೆ ಸ್ತ್ರೀಯು ಪುರುಷನ ಪ್ರಭಾವವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪುರುಷನು ದೇವರ ಸ್ವರೂಪವೂ ಮಹಿಮೆಯೂ ಆಗಿರುವುದರಿಂದ, ತನ್ನ ತಲೆಗೆ ಮುಸುಕು ಹಾಕಬೇಕಾಗಿಲ್ಲ. ಆದರೆ ಸ್ತ್ರೀಯು ಪುರುಷನ ಮಹಿಮೆಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಘವ್ಮಾನುಸ್ ಅಪ್ನಾಚೆ ಟಕ್ಲೆ ದಾಪುಚೆ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ತೊ ದೆವಾಚೊ ರುಪ್ ಅನಿ ತೆಚ್ಯಾ ಮಹಿಮೆಚೊ ಆರ್ಸೊ, ಖರೆ ಬಾಯ್ಕೊಮಾನುಸ್ ಘವ್ಮಾನ್ಸಾಕ್ ಗೌರವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:7
10 ತಿಳಿವುಗಳ ಹೋಲಿಕೆ  

ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ಹಾಗೆ ಮುಸುಕು ಹಾಕದ ಸ್ತ್ರೀ ತನ್ನ ತಲೆಗೂದಲನ್ನು ತೆಗೆದುಬಿಡಲಿ. ಸ್ತ್ರೀಗೆ ತಲೆಗೂದಲನ್ನು ಕತ್ತರಿಸುವುದಾಗಲಿ, ಬೋಳಿಸುವುದಾಗಲಿ ಲಜ್ಜಾಸ್ಪದವಾಗಿದ್ದರೆ, ಆಕೆ ತಲೆಗೆ ಮುಸುಕು ಹಾಕಿಕೊಳ್ಳಲಿ.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು