Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:10 - ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಎಕ್ಲ್ಯಾಕ್ ವಿಚಿತ್ರ್ ಕಾಮಾ ಕರ್‍ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಪ್ರವಾದ್ ಕರ್‍ತಲೆ, ತಿನ್ವೆಚ್ಯಾಕ್ ಪ್ರೆರಕ್ ಆತ್ಮೆ ಪರಿಕ್ಷಾ ಕರುನ್ ಬಗ್ತಲೆ ವರು ಗಾವ್ತಾ. ಎಕ್ಲ್ಯಾಕ್ ದುಸ್ರಿ ದುಸ್ರಿ ಬಾಶಾ ಬೊಲ್ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಹ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೆ ವರು ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:10
38 ತಿಳಿವುಗಳ ಹೋಲಿಕೆ  

ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಪುರುಷನು ತಲೆಯ ಮೇಲೆ ಮುಸುಕು ಹಾಕಿಕೊಂಡು ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಕ್ರಿಸ್ತಯೇಸುವಿಗೆ ಅವಮಾನ ತರುತ್ತಾನೆ.


ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು