Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:12 - ಕನ್ನಡ ಸತ್ಯವೇದವು C.L. Bible (BSI)

12 ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಆಂಗ್ ಎಕ್ ಹೊಲ್ಯಾರ್ಬಿ ತೆಚಿ ಭಾಗಾ ಲೈ ಹಾತ್; ಅನಿ ಅಂಗಾಚಿ ತಿ ಸಗ್ಳಿ ಭಾಗಾ ಲೈ ಹೊಲ್ಯಾರ್ಬಿ ಎಕುಚ್ ಆಂಗ್ ಹೊತ್ತ್ಯಾತ್, ತಸೆಚ್ ಕ್ರಿಸ್ತಾತ್‌ಬಿ ಘಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:12
16 ತಿಳಿವುಗಳ ಹೋಲಿಕೆ  

ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ.


ಹೀಗೆ ಅಂಗಗಳು ಅನೇಕವಾಗಿದ್ದರೂ ದೇಹ ಮಾತ್ರ ಏಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು