Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:18 - ಕನ್ನಡ ಸತ್ಯವೇದವು C.L. Bible (BSI)

18 ಸದ್ಯ, ದೇವರು ತಮ್ಮ ಚಿತ್ತಾನುಸಾರ, ಪ್ರತಿಯೊಂದು ಅಂಗವನ್ನು ಸರಿಯಾಗಿ ಜೋಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಮನುನ್ ಎಕ್ ಅಂಗಾತ್ ದುಸ್ರ್ಯಾ, ದುಸ್ರ್ಯಾ ಭಾಗಾಕ್ನಿ ದೆವಾನ್ ಅಪ್ನಾಂಚ್ಯಾ ಮನಾಕ್ ಯೆತಾ ತಸೆ ದುಸ್ರೊ ದುಸ್ರೊ ಜಾಗೊ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:18
18 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಬಾಹ್ಯ ಅಂಗಗಳಿಗೆ ಇಂಥ ಸಂರಕ್ಷಣೆ ಅಗತ್ಯವಿರುವುದಿಲ್ಲ. ದೇಹವನ್ನು ನಿರ್ಮಿಸಿದ ದೇವರು ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ದೇವರು ತಮ್ಮ ಚಿತ್ತಾನುಸಾರ ಅದಕ್ಕೆ ದೇಹಾಕೃತಿಯನ್ನು ಕೊಡುತ್ತಾರೆ. ಒಂದೊಂದು ಬೀಜಕ್ಕೂ ಅದರದರ ದೇಹಾಕೃತಿಯನ್ನು ಕೊಡುತ್ತಾರೆ.


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ದೇಹವಿಡೀ ಕಣ್ಣೇ ಆದರೆ ಅದು ಕೇಳುವ ಬಗೆ ಹೇಗೆ? ಅಥವಾ ಅದು ಇಡೀ ಕಿವಿಯೇ ಆದರೆ, ಮೂಸಲು ಮೂಗು ಎಲ್ಲಿ?


ಅವೆಲ್ಲವೂ ಒಂದೇ ಅಂಗವಾಗಿದ್ದರೆ ಆಗ ದೇಹವೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು