Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ವಿಶ್ವಾಸಾತ್ ನತ್ತ್ಯಾಶಿ ತನ್ನಾ ತುಮ್ಚ್ಯಾ ಮನಾಕ್ ಯೆತಾ ತಸೆ ಮುಕ್ಕ್ಯಾ ಮುರ್ತಿಯಾಂಚೆ ಆರಾದನ್ ಕರುಕ್ ತುಮಿ ಪಳುನ್ ಖೆಳುಕ್ ಲಾಗಲ್ಲ್ಯಾಸಿ ಮನುನ್ ತುಮ್ಕಾಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:2
15 ತಿಳಿವುಗಳ ಹೋಲಿಕೆ  

ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಬಾಯಿದ್ದರೂ ಅವು ಮಾತಾಡುವುದಿಲ್ಲ I ಕಣ್ಣುಗಳಿದ್ದರೂ ಅವು ಕಾಣುವುದಿಲ್ಲ II


ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ಬಾಯಿದ್ದರೂ ಅವು ಮಾತನಾಡುವುದಿಲ್ಲ I ಕಣ್ಣುಗಳಿದ್ದರೂ ಅವು ನೋಡುವುದಿಲ್ಲ II


ಕೈಯಿದ್ದರೂ ಅವು ಮುಟ್ಟುವುದಿಲ್ಲ I ಕಾಲಿದ್ದರೂ ಅವು ನಡೆಯುವುದಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು