Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:26 - ಕನ್ನಡ ಸತ್ಯವೇದವು C.L. Bible (BSI)

26 ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಎಕ್ ಭಾಗಾಕ್ ದುಕ್ತಾ ಹೊಲ್ಯಾರ್;ಸಗ್ಳ್ಯಾ ಭಾಗಾಕ್ನಿಬಿ ದುಕ್ತಾ; ಎಕ್ ಭಾಗಾಕ್ ಮಾನ್ ಗಾವ್ಲ್ಯಾ ಸಗ್ಳ್ಯಾ ಭಾಗಾಕ್ಬಿ ಖುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:26
9 ತಿಳಿವುಗಳ ಹೋಲಿಕೆ  

ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


ದೇಹದಲ್ಲಿ ಭಿನ್ನಭೇದವಿಲ್ಲದೆ ಅಂಗಗಳು ಒಂದಕ್ಕೊಂದರ ಹಿತವನ್ನು ಗಮನಿಸುವಂತೆ ಮಾಡಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು