1 ಕೊರಿಂಥದವರಿಗೆ 12:3 - ಕನ್ನಡ ಸತ್ಯವೇದವು C.L. Bible (BSI)3 ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರುವದರಿಂದ ನಾನು ನಿಮಗೆ ತಿಳಿಸುವದನ್ನು ಕೇಳಿರಿ; ದೇವರಾತ್ಮನ ಪ್ರೇರಣೆಯಿಂದ ಮಾತಾಡುವ ಯಾವ ಮನುಷ್ಯನಾದರೂ ಯೇಸುವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ, ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹೆಚ್ಯಾ ಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ಆತ್ಮ್ಯಾಚ್ಯಾ ಪ್ರೆರನಾಚ್ಯಾ ವೈನಾ ಬೊಲ್ತಲ್ಲೊ ಕೊನ್‍ಬಿ ಮಾನುಸ್ ಜೆಜು ಸರಾಪ್ ಪಡಲ್ಲೊ ಮನಿನಾ! ತಸೆಚ್ ಪವಿತ್ರ್ ಆತ್ಮ್ಯಾಚೊ ಪ್ರಭಾವ್ ನಸ್ತಾನಾ ಕೊನ್‍ಬಿ ಮಾನುಸ್ “ಜೆಜುಕ್ ಧನಿ” ಮನುನ್ ಸಾಂಗುಕ್ ಸಕಿನಾ. ಅಧ್ಯಾಯವನ್ನು ನೋಡಿ |
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.