Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:4 - ಕನ್ನಡ ಸತ್ಯವೇದವು C.L. Bible (BSI)

4 ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವರಗಳಲ್ಲಿ ಬೇರೆ ಬೇರೆ ವಿಧಗಳುಂಟು, ದೇವರಾತ್ಮನು ಒಬ್ಬನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೊಲ್ಯಾರ್ಬಿ ಆತ್ಮಿಕ್ ವರಾ ಲೈ ಲೈ ಥರಿಚಿ ಹಾತ್ ಖರೆ ಎಕುಚ್ ಪವಿತ್ರ್ ಆತ್ಮೊ ತಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:4
11 ತಿಳಿವುಗಳ ಹೋಲಿಕೆ  

ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಎಲ್ಲರೂ ನಾನಿರುವಂತೆ ಇರಬೇಕೆಂಬುದು ನನ್ನ ಅಭಿಲಾಷೆ. ಆದರೆ ದೇವರು ಪ್ರತಿಯೊಬ್ಬನಿಗೂ ವಿಶಿಷ್ಟ ವರವನ್ನು ದಯಪಾಲಿಸಿದ್ದಾರೆ. ಒಬ್ಬನಿಗೆ ಒಂದು ವರವಾದರೆ, ಮತ್ತೊಬ್ಬನಿಗೆ ಇನ್ನೊಂದು ವರವುಂಟು.


ಸಹೋದರರೇ, ಪವಿತ್ರಾತ್ಮ ಅವರ ವರದಾನಗಳ ಬಗ್ಗೆ ನೀವು ಸರಿಯಾದ ಅರಿವುಳ್ಳವರಾಗಿರಬೇಕು.


ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು