Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:6 - ಕನ್ನಡ ಸತ್ಯವೇದವು C.L. Bible (BSI)

6 ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಕಾಮಾಬಿ ದುಸ್ರಿ ದುಸ್ರಿ ಥರಿಚಿ ಹಾತ್; ಖರೆ ಸಗ್ಳ್ಯಾಂಚಿ ಸಗ್ಳಿ ಕಾಮಾ ಹೊಯ್ ಸರ್ಕೆ ಕರ್‍ತಲೊ ದೆವ್ ಎಕ್ಲೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:6
12 ತಿಳಿವುಗಳ ಹೋಲಿಕೆ  

ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.


ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.


ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು