Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:8 - ಕನ್ನಡ ಸತ್ಯವೇದವು C.L. Bible (BSI)

8 ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ಪವಿತ್ರ್ ಆತ್ಮೊ ಎಕ್ಲ್ಯಾಕ್ ಬುದ್ದಿಚೊ, ಅನಿಎಕ್ಲ್ಯಾಕ್ ಶಾನ್ಪಾನಾಚೊ ವರು ದಿತಾ. ಅನಿಎಕ್ಲ್ಯಾಕ್ ತೆಚೊ ಅರ್ಥ್ ಸೊಡ್ಸುನ್ ಸಾಂಗ್ತಲೆ ವರು ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:8
30 ತಿಳಿವುಗಳ ಹೋಲಿಕೆ  

ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.


ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು