1 ಕೊರಿಂಥದವರಿಗೆ 13:11 - ಕನ್ನಡ ಸತ್ಯವೇದವು C.L. Bible (BSI)11 ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಿಯಾ ಬಾರಿಕ್ ಹೊತ್ತೊ ತನ್ನಾ ಬಾರ್‍ಕ್ಯಾ ಪೊರಾ ಸಾರ್ಕೆ ಬೊಲಿ, ಬಾರಿಕ್ ಪೊರಾ ಸಾರ್ಕೆ ಕಳ್ವುನ್ ಘೆಯ್ ಅನಿ ಬಾರಿಕ್ ಪೊರಾ ಸಾರ್ಕೆ ಚಿಂತಿ. ಅತ್ತಾ ಜಾನ್ತೊ ಹೊಲ್ಲ್ಯಾ ತನ್ನಾ ಬಾರಿಕ್ ಪೊರಾಚಿ ಸಗ್ಳಿ ಚಲ್ನುಕ್ ಮಿಯಾ ಸೊಡುನ್ ಸೊಡ್ಲಾ. ಅಧ್ಯಾಯವನ್ನು ನೋಡಿ |