Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:4 - ಕನ್ನಡ ಸತ್ಯವೇದವು C.L. Bible (BSI)

4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:4
53 ತಿಳಿವುಗಳ ಹೋಲಿಕೆ  

ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.


ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು