12 ಹಾಗೆಯೇ ನೀವೂ ಆತ್ಮಪ್ರೇರಿತವಾದ ನುಡಿಗಳನ್ನಾಡುವದಕ್ಕೆ ಅಪೇಕ್ಷಿಸುವವರಾಗಿರುವದರಿಂದ ಸಭೆಗೆ ಭಕ್ತಿವೃದ್ಧಿ ಉಂಟಾಗುವ ಹಾಗೆ ಅದಕ್ಕಿಂತಲೂ ಹೆಚ್ಚಾದದ್ದನ್ನು ಮಾಡುವದಕ್ಕೆ ಪ್ರಯತ್ನಿಸಿರಿ.
12 ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.
ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.
ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ , ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.