1 ಕೊರಿಂಥದವರಿಗೆ 14:13 - ಕನ್ನಡ ಸತ್ಯವೇದವು C.L. Bible (BSI)13 ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದದರಿಂದ ವಾಣಿಯನ್ನಾಡುವವನು ತನಗೆ ಅದರ ಅರ್ಥವನ್ನು ಹೇಳುವ ಶಕ್ತಿಯೂ ಉಂಟಾಗಬೇಕೆಂದು ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತಸೆ ಮನುನ್, ವಿಚಿತ್ರ್ ಬಾಶಾನಿ ಬೊಲ್ತಲೊ, ತ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೊ ವರುಬಿ ಅಪ್ನಾಕ್ ಗಾವುಂದಿತ್ ಮನುನ್ ಮಾಗ್ನೆ ಕರುಂದಿತ್. ಅಧ್ಯಾಯವನ್ನು ನೋಡಿ |
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.