Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:20 - ಕನ್ನಡ ಸತ್ಯವೇದವು C.L. Bible (BSI)

20 ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಭಾವಾನು ಅನಿ ಭೆನಿಯಾನು, ಪೊರಾಂಚ್ಯಾ ಬುದ್ದಿಚೆ ಹೊವ್ನಕಾಸಿ,ಬುರ್ಶಾಪಾನಾಚ್ಯಾ ವಿಶಯಾತ್ ವಾಡಲ್ಲ್ಯಾ ಪೊರಾಂಚ್ಯಾ ಸಾರ್ಕೆ ಚಿಂತ್ತಲೆ ಹೊವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:20
25 ತಿಳಿವುಗಳ ಹೋಲಿಕೆ  

ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.


ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು