Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:23 - ಕನ್ನಡ ಸತ್ಯವೇದವು C.L. Bible (BSI)

23 ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅಶೆ ರ್‍ಹಾತಾನಾ ಸಗ್ಳೊ ದೆವಾಚ್ಯಾ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾಕ್ಡೆ ಸಗ್ಳೆಬಿ ವಿಚಿತ್ರ್ ಬಾಶಾನಿ ಬೊಲುನ್ ಹಾತ್ ಮನುನ್ ಚಿಂತುವಾ, ಹ್ಯಾ ಎಳಾರ್ ಕೊನ್‍ಬಿ ಎಕ್ಲೊ ಸಾದೊ ಮಾನುಸ್ ನಾ ಹೊಲ್ಯಾರ್ ವಿಶ್ವಾಸಾತ್ ನಸಲ್ಲೊ ಮಾನುಸ್ ಥೈ ಯೆಲ್ಯಾರ್ ತೊ ತುಮ್ಕಾ ಪಿಶೆ ಲಾಗ್ಲಾ ಮನಿನಸ್ತಾನಾ ರ್‍ಹಾಯ್ಲ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:23
6 ತಿಳಿವುಗಳ ಹೋಲಿಕೆ  

ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.


ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು