Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:29 - ಕನ್ನಡ ಸತ್ಯವೇದವು C.L. Bible (BSI)

29 ದೇವರ ವಾಕ್ಯವನ್ನು ಬೋಧಿಸುವವರು ಇಬ್ಬರು ಇಲ್ಲವೆ ಮೂವರು ಮಾತ್ರ ಮಾತನಾಡಲಿ. ಉಳಿದವರು ಅವರ ಮಾತನ್ನು ವಿವೇಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತಾಡಲಿ, ವಿುಕ್ಕಾದವರು ಕೇಳಿ ವಿವೇಚನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಬ್ಬರು ಅಥವಾ ಮೂವರು ಪ್ರವಾದಿಗಳು ಮಾತ್ರ ಮಾತಾಡಬೇಕು. ಅವರು ಹೇಳುವುದನ್ನು ಇತರರು ವಿವೇಚಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಪ್ರವಾದ್ ಕರುನ್ ಬೊಲ್ತಲೆ ರ್‍ಹಾಲ್ಯಾರ್, ದೊಗಾ ನಾ ಹೊಲ್ಯಾರ್ ತಿಗಾ ರ್‍ಹಾಂವ್ದಿತ್ ಅನಿ ಹುರಲ್ಲೆ ತೆನಿ ಸಾಂಗಲ್ಲೆ ತಪಾಸುನ್ ಬಗುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:29
10 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ವಿವರಿಸಬಲ್ಲವರು ಯಾರೂ ಇಲ್ಲವಾದರೆ, ಪರವಶಾಭಾಷೆಗಳನ್ನು ಆಡುವವನು ಸಭೆಯಲ್ಲಿ ಮೌನದಿಂದಿರಲಿ. ತನ್ನೊಳಗೆ ದೇವರೊಡನೆ ಮಾತನಾಡಿಕೊಳ್ಳಲಿ.


ಸಭೆಯಲ್ಲಿ ಕುಳಿತವರಲ್ಲಿ ಒಬ್ಬನಿಗೆ ದೇವರ ಶ್ರುತಿಲಭಿಸಿತೆಂದರೆ ಮೊದಲು ಮಾತನಾಡುತ್ತಿದ್ದವನು ಮೌನ ತಳೆಯಲಿ.


ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು