Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:34 - ಕನ್ನಡ ಸತ್ಯವೇದವು C.L. Bible (BSI)

34 ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಬಾಯ್ಕೊಮನ್ಸಾನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಗಪ್ ರ್‍ಹಾವ್ಚೆ. ತೆಂಕಾ ಬೊಲುಕ್ ಅವಕಾಸ್ ನಾ. ಶಾಸ್ತರಾತ್ ಸಾಂಗಲ್ಲ್ಯಾ ಸಾರ್ಕೆ ಖಾಯ್ಲ್ ಹೊವ್ನ್ ರ್‍ಹಾತಲೆ ತೆಂಕಾ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:34
15 ತಿಳಿವುಗಳ ಹೋಲಿಕೆ  

ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.


ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಪವಿತ್ರಗ್ರಂಥದಲ್ಲಿ ಇಂತಿದೆ: ಅನ್ಯಭಾಷೆಯವರ ಮುಖಾಂತರ ಅನ್ಯದೇಶೀಯರ ಬಾಯ ಮುಖಾಂತರ ನಾನೆನ್ನ ಜನರೊಡನೆ ಮಾತಾಡಿದಾಗಲೂ ಎನ್ನ ಮಾತಿಗೆ ಕಿವಿಗೊಡರವರು, ಎಂದರು ಪ್ರಭು.”


ಸ್ತ್ರೀ ಮುಸುಕಿಲ್ಲದೆ ದೇವರನ್ನು ಪ್ರಾರ್ಥಿಸುವುದು ಲಕ್ಷಣವೇ? ನೀವೇ ತೀರ್ಮಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು