Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:36 - ಕನ್ನಡ ಸತ್ಯವೇದವು C.L. Bible (BSI)

36 ದೇವರ ವಾಕ್ಯ ನಿಮ್ಮಿಂದ ಹೊರಟಿತೋ? ಅಥವಾ ನಿಮಗೆ ಮಾತ್ರ ತಲುಪಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಏನು, ದೇವರ ವಾಕ್ಯವು ನಿವ್ಮಿುಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರ ಉಪದೇಶವು ನಿಮ್ಮಿಂದ ಬರುತ್ತದೆಯೇ? ಇಲ್ಲ! ಆ ಉಪದೇಶವನ್ನು ಹೊಂದಿಕೊಂಡವರು ನೀವು ಮಾತ್ರವೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಸಾಂಗಾ ಮಾಕಾ ದೆವಾಚಿ ಗೊಸ್ಟ್ ತುಮ್ಚ್ಯಾಕ್ನಾ, ನಾಹೊಲ್ಯಾರ್ ತುಮ್ಕಾ ಯೆವ್ಡೆಚ್ ತಿ ಯೆವ್ನ್ ಪಾವ್ಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:36
15 ತಿಳಿವುಗಳ ಹೋಲಿಕೆ  

ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು