Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:4 - ಕನ್ನಡ ಸತ್ಯವೇದವು C.L. Bible (BSI)

4 ಪರವಶಾಭಾಷೆಗಳನ್ನು ಆಡುವವನು ತನ್ನನ್ನೇ ಅಭಿವೃದ್ಧಿಗೊಳಿಸಿಕೊಳ್ಳುತ್ತಾನೆ. ಆದರೆ ದೇವರ ವಾಕ್ಯವನ್ನು ಸಾರುವವನು ಇಡೀ ಧರ್ಮಸಭೆಯನ್ನೇ ಅಭಿವೃದ್ಧಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವಾಣಿಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ, ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದುಸ್ರ್ಯಾ, ದುಸ್ರ್ಯಾ ಬಾಶಾನ್ ಬೊಲ್ತಾ ತೊ ಅಪ್ನಾಕುಚ್ ಪ್ರಚಾರ್ ಕರ್‍ತಾ; ಖರೆ ಪ್ರವಾದ್ ಕರುನ್ ಬೊಲ್ತಾ ತೊ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ವಾಡ್ವುಕ್ ಮಜತ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:4
12 ತಿಳಿವುಗಳ ಹೋಲಿಕೆ  

ಪರವಶಾಭಾಷೆಗಳನ್ನು ಆಡುವುದರ ಸಾಕ್ಷ್ಯ ವಿಶ್ವಾಸಿಗಳಿಗಲ್ಲ, ಅವಿಶ್ವಾಸಿಗಳಿಗೆ. ದೇವರ ವಾಕ್ಯವನ್ನು ಪ್ರಬೋಧಿಸುವುದರ ಸಾಕ್ಷ್ಯವು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;


ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.


ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ , ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು