1 ಕೊರಿಂಥದವರಿಗೆ 15:10 - ಕನ್ನಡ ಸತ್ಯವೇದವು C.L. Bible (BSI)10 ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೊಲ್ಯಾರ್ಬಿ ಮಿಯಾ ಅತ್ತಾ ಕಾಯ್ ತರ್ ಹೊವ್ನ್ ಹಾವ್ ಮಟ್ಲ್ಯಾರ್ ತೆ ದೆವಾಚ್ಯಾ ಕುರ್ಪೆಚ್ಯಾ ವೈನಾಚ್ ಹೊಲಾ. ತೆನಿ ದಿಲ್ಲಿ ತಿ ಕುರ್ಪಾ ಮಾಜ್ಯಾ ಭುತ್ತುರ್ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಹೊವ್ನ್ ಜಾವ್ಕ್ ನಾ. ಖರೆಚ್ ಸಾಂಗುಚೆ ಹೊಲ್ಯಾರ್, ಹುರಲ್ಲ್ಯಾ ಅಪೊಸ್ತಲಾಂಚ್ಯಾನ್ಕಿ ಜಾಸ್ತಿ ಮಿಯಾ ಮ್ಹಿನತ್ ಕರುನ್ ರಾಬ್ಲಾ. ಅಧ್ಯಾಯವನ್ನು ನೋಡಿ |