Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:23 - ಕನ್ನಡ ಸತ್ಯವೇದವು C.L. Bible (BSI)

23 ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಹರಿ ಎಕ್ಲ್ಯಾಕ್ ತೆಂಚ್ಯಾ-ತೆಂಚ್ಯಾ ಪಾಳಿ ಪರ್‍ಕಾರ್ ಸಗ್ಳ್ಯಾಕ್ನಿ ಎಕ್ ಜಾಮಿನ್ ಸರ್ಕೆ ಕ್ರಿಸ್ತಾಕ್; ಅನಿ ಮಾನಾ ಕ್ರಿಸ್ತ್ ಯೆತಲ್ಯಾ ಎಳಾರ್, ಕ್ರಿಸ್ತಾಚ್ಯಾ ಎಕ್ವಟ್ಟಾತ್ ಹೊತ್ತ್ಯಾ ಸಗ್ಳ್ಯಾಕ್ನಿ ಝಿತ್ತೆ ಕರುನ್ ಉಟ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:23
15 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು