Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:28 - ಕನ್ನಡ ಸತ್ಯವೇದವು C.L. Bible (BSI)

28 ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆಚ್ಯಾ ಬದ್ಲಾಕ್, ಸಗ್ಳಿ ಜಿನ್ಸಾ ಕ್ರಿಸ್ತಾಕ್ ಖಾಲ್ತಿ ಹೊಯ್ ಸರ್ಕೆ ಕರುನ್ ಹೊಲ್ಲ್ಯಾಚ್ಯಾ ಮಾನಾ ಲೆಕುಚ್ ಸಗ್ಳಿ ಜಿನ್ಸಾ ಅಪ್ನಾಚ್ಯಾ ಹಾತಾ ಖಾಲ್ತಿ ದಿಲ್ಲ್ಯಾ ದೆವಾಕ್ ಖಾಲ್ತಿ ಹೊತಾ; ಅಶೆ ದೆವುಚ್ ಸಗ್ಳ್ಯಾಂಚ್ಯಾ ವರ್‍ತಿ ಅಪ್ನಾಚಿ ಸಗ್ಳಿ ಪದ್ವಿ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:28
18 ತಿಳಿವುಗಳ ಹೋಲಿಕೆ  

ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.


ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ.


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II


ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು