Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:35 - ಕನ್ನಡ ಸತ್ಯವೇದವು C.L. Bible (BSI)

35 ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸತ್ತವರು ಹೇಗೆ ಎಬ್ಬಿಸಲ್ಪಡುತ್ತಾರೆ, ಎಂಥ ದೇಹದಿಂದ ಬರುತ್ತಾರೆ ಎಂದು ಒಬ್ಬನು ಕೇಳಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅತ್ತಾ ಕೊನ್ಬಿ ಎಕ್ಲೊ ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲೆ ಮಟ್ಲ್ಯಾರ್ ಕಶೆ ತೆ? ಕಸ್ಲೆ ಆಂಗ್ ಘೆವ್ನ್ ತೆನಿ ಝಿತ್ತೆ ಹೊವ್ನ್ ಯೆತ್ಯಾತ್? ಇಚಾರುಕ್ಬಿ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:35
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.


“ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.


ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.


“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II


ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?


ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು