Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:41 - ಕನ್ನಡ ಸತ್ಯವೇದವು C.L. Bible (BSI)

41 ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚುಕಡಿಮೆಯುಂಟಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ದಿಸಾಚೊ ಉಜ್ವೊಡ್ ಎಕ್ ನಮುನ್ಯಾಚೊ, ಚಂದ್ರಾಮಾಚೊ ಎಕ್ ನಮುನ್ಯಾಚೊ, ಅನಿ ಚಿಕಿಯಾಂಚೊ ಅನಿಎಕ್ ನಮುನ್ಯಾಚೊ. ಎವ್ಡೆಚ್ ನ್ಹಯ್, ಚಿಕಿಯಾಂಚ್ಯಾ ಉಜ್ವೊಡಾತ್ನಿ ಸೈತ್ ಫರಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:41
10 ತಿಳಿವುಗಳ ಹೋಲಿಕೆ  

ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ,


ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ.


ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.


ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು