Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:42 - ಕನ್ನಡ ಸತ್ಯವೇದವು C.L. Bible (BSI)

42 ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಮರಲ್ಲೆ ಝಿತ್ತೆ ಹೊವ್ನ್ ಉಟ್ತಲೆಬಿ ಅಸೆಚ್ ಹೊತಾ. ಉಗಾತ್ ಘಾಲ್ತಾತ್ ತೆ ನಾಸ್ ಹೊವ್ನ್ ಜಾತಲೆ ತೆ ಖರೆ ಹಾಯ್, ಖರೆ ಝಿತ್ತೆ ಹೊವ್ನ್ ಉಟ್ತಲೆ ಕನ್ನಾಚ್ ನಾಸ್ ಹೊಯ್ನಸಲ್ಲೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:42
20 ತಿಳಿವುಗಳ ಹೋಲಿಕೆ  

ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.


ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’


ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು