Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:47 - ಕನ್ನಡ ಸತ್ಯವೇದವು C.L. Bible (BSI)

47 ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮೊದಲನೆಯ ಮನುಷ್ಯನು ಭೂವಿುಯೊಳಗಿಂದ ಉತ್ಪನ್ನನಾಗಿ ಮಣ್ಣಿಗೆ ಸಂಬಂಧಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಪಯ್ಲೆಚೊ ಮಾನುಸ್ ಜಿಮ್ನಿಚೊ ಜಿಮ್ನಿಚ್ಯಾ ಧುಳಿನ್ ಕರಲ್ಲೊ; ದೊನ್ವೆಚೊ ಮಾನುಸ್ ಸರ್ಗಾ ವೈನಾ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:47
16 ತಿಳಿವುಗಳ ಹೋಲಿಕೆ  

ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು