Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:10 - ಕನ್ನಡ ಸತ್ಯವೇದವು C.L. Bible (BSI)

10 ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿಮೊತಿ ಯೆಲ್ಯಾರ್‍ಬಿ ತೊ ಕಸ್ಲೆಬಿ ಭಿಂಯೆ ನಸ್ತಾನಾ ತುಮ್ಚ್ಯಾ ವಾಂಗ್ಡಾ ರ್‍ಹಾತಲಿ ಯವಸ್ತಾ ಕರಾ; ಕಶ್ಯಾಕ್ ಮಟ್ಲ್ಯಾರ್ ಮಿಯಾ ಕರ್‍ತಾ ತಸೆಚ್ ತೊಬಿ ಧನಿಯಾಚೆ ಕಾಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:10
11 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.


ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು