Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:12 - ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರನಾದ ಅಪೊಲ್ಲೋಸನ ಸಂಗತಿಯೇನಂದರೆ ಸಹೋದರರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ಅವನನ್ನು ಬಹಳವಾಗಿ ಬೇಡಿಕೊಂಡೆನು. ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ. ಒಳ್ಳೇ ಸಮಯ ಸಿಕ್ಕಿದಾಗ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚ್ಯಾ ಭಾವಾ ಅಪೊಲ್ಲೊಚ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ತೆನಿ ಹುರಲ್ಲ್ಯಾ ಭಾವಾಂಚ್ಯಾ ವಾಂಗ್ಡಾ ಯೆವ್ನ್ ತುಮ್ಕಾ ಭೆಟುಚೆ ಮನುನ್ ಮಿಯಾ ತೆಕಾ ಲೈ ಸಾಂಗಟ್ಲಾ, ಖರೆ ಹ್ಯಾ ಪಟಿ ತೆನಿ ಯೆವ್ಕ್ ಮನ್ ಕರುಕ್‍ ನಾ, ತೆಕಾ ಅವ್ಕಾಸ್ ಗಾವ್ಲೊ ತರ್ ತೊ ಖರೆಚ್‍ಬಿ ತುಮ್ಕಾ ಯೆವ್ನ್ ಭೆಟ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:12
12 ತಿಳಿವುಗಳ ಹೋಲಿಕೆ  

ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.


ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಧರ್ಮಶಾಸ್ತ್ರಜ್ಞನಾದ ಜೇನನಿಗೂ ಅಪೊಲೋಸನಿಗೂ ಅವರ ಪ್ರಯಾಣಕ್ಕೆ ಬೇಕಾದ ಸಹಾಯಮಾಡು. ಅವರಿಗೆ ಏನು ಕೊರತೆಯಾಗದಂತೆ ನೋಡಿಕೋ.


ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು