Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:15 - ಕನ್ನಡ ಸತ್ಯವೇದವು C.L. Bible (BSI)

15 ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಭಾವಾನು ಅನಿ ಭೆನಿಯಾನು, ಅನಿಎಕ್ ಉಪ್ಕಾರ್ ತುಮ್ಚ್ಯಾಕ್ಡೆ ಮಿಯಾ ಮಾಗ್ತಲೊ ಹಾಂವ್, ಸ್ತೆಫನಾಚ್ಯಾ ಘರ್ಚ್ಯಾಂಚಿ ತುಮ್ಕಾ ವಳಕ್ ಹಾಯ್, ಅಖಾಯಿಯಾತ್ ಧನಿಯಾ ಕಡೆ ಪರತಲ್ಲ್ಯಾಂಚ್ಯಾ ಮದ್ದಿ ಸಗ್ಳ್ಯಾನ್ ಪಯ್ಲೆ ತೆನಿಚ್. ದೆವಾಚ್ಯಾ ಲೊಕಾಂಚಿ ಸೆವಾ ಕರ್‍ತಲ್ಯಾತ್ ತೆನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:15
18 ತಿಳಿವುಗಳ ಹೋಲಿಕೆ  

ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.


ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.


ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.


ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು